

ಉಡುಪಿ: ಅನೇಕ ಪ್ರಕರಣಗಳಲ್ಲಿ ತಲೆಮರೆಸಿಕೊಂಡು ಮತ್ತೆ ಪೊಲೀಸರ ಬಲೆಗೆ ಬಿದ್ದ ಗರುಡ ಗ್ಯಾಂಗ್ ಸದಸ್ಯ ಆರೋಪಿ ಇಸಾಕ್ ನ ಪೊಲೀಸ್ ಕಸ್ಟಡಿ ಅವಧಿಯನ್ನು ನಾಳೆಯವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ.
ಜಿಲ್ಲಾಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿ ಪೊಲೀಸರು ಇಸಾಕ್ ನನ್ನು ಕೋರ್ಟಿಗೆ ಹಾಜರುಪಡಿಸಿದ್ದರು. ನಂತರ ಎಪ್ರಿಲ್ ಒಂದರವರೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದರು.
ತನಿಖೆ ಬಾಕಿ ಇರುವ ಕಾರಣ ನ್ಯಾಯಾಲಯ ಆತನ ಪೊಲೀಸ್ ಕಸ್ಟಡಿ ಅವಧಿಯನ್ನು ನಾಳೆಯವರೆಗೆ ವಿಸ್ತರಿಸಿ ಆದೇಶ ನೀಡಿದೆ.