
ಕಾರ್ಕಳ: ಮಿಯ್ಯಾರು ಗ್ರಾಮದ ಮುಡಾರು ರಾಮೆರುಗುತ್ತು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾರು ಹರಿದು ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿ ಕಡಂಬಳ ನಿವಾಸಿ ಪಾಂಡುರಂಗ ಆಚಾರ್ಯ (57) ಎಂದು ತಿಳಿದು ಬಂದಿದೆ.
ಬುಧವಾರ ಸಂಜೆ ವೇಳೆಗೆ ರಸ್ತೆ ಬದಿ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆಯೇ ಹರಿದಿದೆ ಎಂದು ತಿಳಿದು ಬಂದಿದೆ.
