ಉಡುಪಿ ನಗರಸಭೆಯ ವ್ಯಾಪ್ತಿಯ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವೃತ್ತಕ್ಕೆ ಮೊಗವೀರ ಸಮಾಜದ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಮತ್ತು ಮಲ್ಪೆ ಬಸ್ ನಿಲ್ದಾಣದ ವೃತ್ತಕ್ಕೆ ಮೊಗವೀರ ಸಮಾಜದ ಮುಖಂಡರಾಗಿದ್ದ ದಿ.ಮಲ್ಪೆ ಮಧ್ವರಾಜರ ಹೆಸರಿಡಲು ನಗರಸಭೆ ಪೌರಾಯುಕ್ತ ಡಾ.ಉದಯ್ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷೆ ಸುಮಿತ್ರಾ ನಾಯಕ್ ಇವರಿಗೆ ಇಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಕೋಟ್ಯಾನ್, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಗುಂಡು ಅಮೀನ್, ಶಂಕರ್ ಸಾಲ್ಯಾನ್ ಹಾಗೂ ಮಾಜಿ ನಗರಸಭಾ ಸದಸ್ಯ ಸತೀಶ್ ಪುತ್ರನ್ ಉಪಸ್ಥಿತರಿದ್ದರು.
ಬಳಿಕ ನಿಯೋಗವು ಈ ಬಗ್ಗೆ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಅವರಿಗೂ ಮನವಿ ಸಲ್ಲಿಸಿ ಒತ್ತಾಯಿಸಿತು.