March 22, 2026
WhatsApp Image 2024-12-30 at 2.42.18 PM

ಉಡುಪಿ: ಡೆತ್ ನೋಟ್‌ ಬರೆದಿಟ್ಟು ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದ್ದು, ಮೃತ ವ್ಯಕ್ತಿಯನ್ನು ಕೊರಂಗ್ರಪಾಡಿ ನಿವಾಸಿ ವಸಂತ ಕೋಟ್ಯಾನ್(59) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವಸಂತ್   ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,  ಅವರು ಬರೆದಿಟ್ಟಿರುವ ಡೆತ್ ನೋಟ್ ಪೋಲಿಸರಿಗೆ ಲಭ್ಯವಾಗಿದೆ.

”ಇತ್ತೀಚಿನ ದಿನಗಳಲ್ಲಿ ನನಗೆ ಜೀವನವೇ ಬೇಡ ಎಂದು ತೀರ್ಮಾನಿಸಿದ್ದು,  ನನ್ನ ಬಗ್ಗೆಯ ಅಪಪ್ರಚಾರದಿಂದ ನನ್ನ ಸಂಬಂಧಿಕರು ದೂರಾದರು. ಅದಕ್ಕೆ ಕಾರಣ ಹೆಂಡತಿ ಹಾಗೂ ಆಕೆಯ ಸ್ನೇಹಿತರು. ಆದರೆ ಹೆಂಡತಿಗೆ ಯಾವ ಶಿಕ್ಷೆಯು ಬೇಡ. ಆಕೆ ನನ್ನ ಮಗಳನ್ನು ಚೆನ್ನಾಗಿ ನೋಡಿಕೊಳ್ಳಲಿ” ಎಂದು ಉಲ್ಲೇಖಿಸಲಾಗಿದೆ.

ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪಿ.ಎಸ್.ಐ ಪುನೀತ್ ಕುಮಾ‌ರ್, ತನಿಖಾ ಸಹಾಯಕಿ ನೇತ್ರಾವತಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ ಎಂದು ತಿಳಿಸಿದು ಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.