ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ

ಉಡುಪಿ :- ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು, ಎಂ.ಐ .ಟಿ ಯ ಎನ್.ಎಸ್.ಎಸ್ ವಿಭಾಗದ ವತಿಯಿoದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾಯ೯ಕ್ರಮ ಜೂನ್ 4 ರಂದು ನಡೆಯಿತು.
ಕಾಯ೯ಕ್ರಮವನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್ ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು, ನಾಗಬನಗಳ ಮೂಲಕ ಪರಿಸರ ಉಳಿಸುವ ಕಾಯ೯ ನಿರಂತರ ಮಾಡಿದ್ದರು. ಆದರೆ ಇಂದು ವಿವಿಧ ಕಾರಣಗಳನ್ನು ನೀಡಿ ಪರಿಸರ ನಾಶ ಮಾಡಲಾಗುತ್ತಿರುವುದು ದುರದೃಷ್ಟ . ನಾವೆಲ್ಲರೂ ಹೆಚ್ಚಿನ ಸಂಖ್ಯೆಗಳಲ್ಲಿ ಗಿಡ ನೆಟ್ಟು ಪಾಲನೆ ಮಾಡಬೇಕು ಎಂದು ಕರೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಪೂರ್ಣಿಮಾ ಅವರು ಮಾತನಾಡಿ ನಮ್ಮ ಇಲಾಖೆಯ ಆವರಣದಲ್ಲಿ ಗಿಡ ನೆಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಇದನ್ನು ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಮುಂದಿನ ದಿನಗಳಲ್ಲಿ ಇನ್ನಷ್ಟು ಗಿಡಗಳನ್ನು ಈ ಪರಿಸರದಲ್ಲಿ ನೆಡುತ್ತೇವೆ ಎಂದರು.
ಎಂ.ಐ.ಟಿ ಮಣಿಪಾಲದ ನಿದೇ೯ಶಕ ಕಾಂ. ಅನಿಲ್ ರಾಣಾ ಶುಭ ಹಾರೈಸಿದರು.ಈ ಸಂದಭ೯ದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಕಾಯ೯ಕ್ರಮದಲ್ಲಿ
ಎಂ.ಐ.ಟಿ ಮಣಿಪಾಲದ ಜಂಟಿ ನಿದೇ೯ಶಕ ಡಾ| ಸೋಮಶೇಖರ್ ಭಟ್, ಭದ್ರತಾ ಅಧಿಕಾರಿ ರತ್ನಾಕರ ಸಾಮಂತ್, ಪ್ರಬಂಧಕ ರಾಮದಾಸ್’ ಎನ್.ಎಸ್.ಎಸ್ ಕಾಯ೯ಕ್ರಮ ಅಧಿಕಾರಿ ಪ್ರೊ.ಬಾಲಕೃಷ್ಣ ಮದ್ದೋಡಿ, ನಮ್ಮ ಮನೆ ನಮ್ಮ ಮರ ತಂಡದ ಅವಿನಾಶ್ ಕಾಮತ್, ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ಗೌರವಾಧ್ಯಕ್ಲ ವಿಶ್ವನಾಥ್ ಶೆಣಿೈ, ಅಧ್ಯಕ್ಷರಾದ ಪ್ರೊ.ಶಂಕರ್, ತಾಲೂಕು ಕಸಾಪ ಗೌರವ ಕಾಯ೯ದಶಿ೯
ಜನಾಧ೯ನ್ ಕೊಡವೂರು, ಕಲಾವಿದೆ ಪದ್ಮಾಸಿನಿ ಉದ್ಯಾವರ ಮುಂತಾದವರಿದ್ದರು. ಕ ಸಾ ಪ ಸಂಘಟನಾ ಕಾರ್ಯದರ್ಶಿ, ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು.

Check Also

ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ- ಡಾ। ವಿಜಯಲಕ್ಷ್ಮಿ ಬಾಳೇಕುಂದ್ರಿ

ವೈದ್ಯಕೀಯ ವೃತ್ತಿ ತುಂಬಾ ಅಮೂಲ್ಯವಾದದ್ದು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ ಎಂದು …

Leave a Reply

Your email address will not be published. Required fields are marked *

You cannot copy content of this page.