ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಗ್ಗೆ 7ಗಂಟೆ ಸುಮಾರಿಗೆ ನಡೆದಿದೆ.

ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ ಮಧ್ಯೆಯೇ ಉರುಳಿ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚಾಲಕ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಆಗಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Check Also

ಮಳೆ ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ಜುಲೈ 9 …

Leave a Reply

Your email address will not be published. Required fields are marked *

You cannot copy content of this page.