

ಉಡುಪಿ : ಇತ್ತೀಚಿಗೆ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಸ್ಲಿಂಮರಿಗೆ ಬೆಂಬಲಿಸಿ ಹೇಳಿಕೆಯೊಂದನ್ನು ನೀಡಿರುವ ಕುರಿತಂತೆ ವಿಚಾರವಾಗಿ ಉಡುಪಿಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಇದರಿಂದ ಬಹು ಸಂಖ್ಯಾತ ಹಿಂದುಗಳಿಗೆ ನೋವಾಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮುಖ್ಯಮಂತ್ರಿಗಳು ತಾವು ಒಂದು ಸಮುದಾಯದ ಪರವಾಗಿದ್ದೇವೆ ಎಂದು ಹೇಳುವುದು ಸರಿಯಲ್ಲ, ಇದರಿಂದ ಬಹುಸಂಖ್ಯಾತ ಹಿಂದೂ ಸಮಾಜಕ್ಕೆ ನೋವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಮುಸ್ಲಿಮರನ್ನು ಓಲೈಸುವ ಹೇಳಿಕೆಗೆ ಪೇಜಾವರ ಶ್ರೀಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅವರು ಒಂದು ಸಮುದಾಯ ವರ್ಗದ ಜೊತೆ ನಿಲ್ಲುತ್ತೇವೆ, ನಿಮ್ಮ ಪಾಲು ಕೊಡುತ್ತೇವೆ ಎನ್ನುವುದು ಎಷ್ಟು ಸರಿ ಎಂದು ಶ್ರೀಗಳು ತೀವ್ರವಾಗಿ ಪ್ರಶ್ನಿಸಿದ್ದಾರೆ.
ಸಿಎಂ ಹೇಳಿಕೆಯಿಂದ ಹಿಂದೂ ಸಮಾಜವನ್ನು ಯಾರೂ ಕೇಳುವವರಿಲ್ಲ ಎಂಬ ಭಾವನೆ ಬರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿಲ್ಲ. ಅವರ ಇಂತಹ ಹೇಳಿಕೆಯಿಂದ ಹಿಂದೂ ಸಮಾಜಕ್ಕೆ ನೋವಾಗುತ್ತದೆ ಎಂದಿದ್ದಾರೆ.