February 7, 2026
WhatsApp Image 2026-02-07 at 5.39.04 PM

ಮಣಿಪಾಲ:ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತಿಯಾದ ಶಬ್ದ ಉಂಟುಮಾಡುವ ಬೈಕ್‌ಗಳಲ್ಲಿ ಅಳವಡಿಸಲಾಗಿದ್ದ ಡಿಫೆಕ್ಟಿವ್ ಸೈಲೆನ್ಸರ್‌ಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಕಳೆದ ಆರು ತಿಂಗಳಿನಿಂದ ಮಣಿಪಾಲ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ವಿವಿಧ ಪ್ರದೇಶಗಳಲ್ಲಿ ವಿಶೇಷ ತಪಾಸಣೆ ನಡೆಸಲಾಗಿದೆ.

ಈ ಅವಧಿಯಲ್ಲಿ ಒಟ್ಟು 120 ಡಿಫೆಕ್ಟಿವ್ ಸೈಲೆನ್ಸರ್‌ಗಳನ್ನು ಪತ್ತೆಹಚ್ಚಿ, ಸಂಬಂಧಿಸಿದಂತೆ 120 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣಗಳಿಂದ ಒಟ್ಟು ರೂ.1,05,000/- ದಂಡವನ್ನು ವಸೂಲಿ ಮಾಡಲಾಗಿದೆ.

ವಶಪಡಿಸಿಕೊಳ್ಳಲಾದ 120 ಡಿಫೆಕ್ಟಿವ್ ಸೈಲೆನ್ಸರ್‌ಗಳನ್ನು ದಿನಾಂಕ 07.02.2026 ರಂದು ಮಣಿಪಾಲ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್ IPS ಅವರ ಸಮಕ್ಷಮ ಬುಲ್ಡೋಜರ್ ಬಳಸಿ ನಾಶಪಡಿಸಲಾಯಿತು.

ಈ ಸಂದರ್ಭದಲ್ಲಿ ಮಣಿಪಾಲ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.