May 24, 2025
ys

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಲಷ್ಕರೆ ತೊಯ್ಬಾ ಮತ್ತು ಜೈಶೆ ಮೊಹಮ್ಮದ್ ಸಂಘಟನೆಗಳ 9 ನೆಲೆಗಳನ್ನು ಧ್ವಂಸಗೊಳಿಸಿ, ನೂರಾರು ಮತಾಂಧ ಉಗ್ರರ ಮಾರಣಹೋಮ ನಡೆಸಿ ಉಗ್ರವಾದವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ಸಾರುವ ಮೂಲಕ ಭಯೋತ್ಪಾದಕರ ಗುಂಡಿಗೆ ಬಲಿಯಾದ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನ್ಯಾಯ ಒದಗಿಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

26 ಅಮಾಯಕರನ್ನು ಬಲಿಪಡೆದ ಉಗ್ರರರನ್ನು ಪಾಕಿಸ್ತಾನದ ಒಳಗಡೆ ಹೋಗಿ ಭಾರತೀಯ ಸೇನೆ ಹೊಡೆದುರುಳಿಸಿದೆ. ಯುದ್ಧದ ಉದ್ವಿಗ್ನತೆ ನಡುವೆಯೇ ಪಾಕ್‌ ವಿರುದ್ಧ ಭಾರತ ಸೇಡನ್ನು ತೀರಿಸಿಕೊಂಡಿದ್ದು, ‌ಪಾಕ್‌ ಹಾಗೂ ಪಿಒಕೆಯ 9 ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ನಡೆಸಿರುವ ಭಾರತ ಉಗ್ರರ ಹುಟ್ಟಡಗಿಸಿ ಪಹಲ್ಗಾಮ್‌ ದಾಳಿಗೆ ಆಪರೇಷನ್‌ ಸಿಂಧೂರ ಮೂಲಕ ಭಾರತ ಪ್ರತೀಕಾರವನ್ನು ತೀರಿಸಿಕೊಂಡಿದೆ.

ಭಾರತೀಯ ಹಿಂದೂ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಸರ್ಕಾರ ‘ಆಪರೇಷನ್‌ ಸಿಂಧೂರ’ ಎಂದು ಕಾರ್ಯಾಚರಣೆಗೆ ನಾಮಕರಣ ಮಾಡಿ ಅತ್ಯಂತ ಯಶಸ್ವಿಯಾಗಿ ಅತ್ಯಂತ ಕ್ಷಿಪ್ರ ಹಾಗೂ ಪರಾಕ್ರಮ ಮೆರೆದು ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡಿದ ಭಾರತೀಯ ಸೇನೆಯ ರಕ್ಷಣಾ ಸಲಹೆಗಾರರಾದ ಶ್ರೀ ಅಜಿತ್ ಧೋವಲ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಹಾಗೂ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಪರಾಕ್ರಮ ಮೆರೆದ ವೀರ ಸೈನಿಕರಿಗೆ ದೇಶದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ದೇಶದ ಜನತೆ ನರೇಂದ್ರ ಮೋದಿ ಸರ್ಕಾರದ ಮೇಲೆ ಭರವಸೆ ಇಟ್ಟು ಮತದಾನ ಮಾಡಿದ ಪ್ರತಿಯೋರ್ವ ಭಾರತೀಯನ ಮತಕ್ಕೆ ಇಂದು ಗೌರವ ಸಲ್ಲಿಸುವ ಕೆಲಸವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ, ಗೃಹ ಸಚಿವ ಶ್ರೀ ಅಮಿತ್ ಶಾ, ರಕ್ಷಣಾ ಸಚಿವ ಶ್ರೀ ರಾಜನಾಥ ಸಿಂಗ್ ಹಾಗೂ ಸಚಿವ ಸಂಪುಟದ ಸಚಿವರು ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>