ಉಡುಪಿ ಜಿಲ್ಲೆಯ ಕಾರ್ಕಳ ಕಸಬಾ ಗ್ರಾಮದ ಗಾಂಧಿ ಮೈದಾನ ಬಳಿ ಗಾoಜಾ ಸೇವನೆ ಮಾಡುತ್ತಿದ್ದ ವಕ್ತಿಯನ್ನು ಕಾರ್ಕಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಾಂಜಾವನ್ನು ಪೇಪರ್‌ನಲ್ಲಿ ಸುತ್ತಿ ಸಿಗರೇಟು ರೀತಿಯಲ್ಲಿ ಸೇದುತ್ತಿದ್ದ ಝೀಶಾನ್ (26) ಎಂಬಾತನನ್ನು ವಶಕ್ಕೆ ಪಡೆದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆರೋಪಿಯು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.