ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000 ಬೆಲೆಯ ಗಾಂಜಾವನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್ ಎನ್‌ವಿರೋಟೆಕ್ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು.
ಈ ಕಾರ್ಯಾಚರಣೆಯಲ್ಲಿ ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿಯ ಅಧ್ಯಕ್ಷರಾದ ಡಾ. ಅರುಣ್ ಕೆ., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಮತ್ತು ಪಿ.ಎ.ಹೆಗಡೆ, ಜಿಲ್ಲಾ ಡ್ರಗ್ ಡಿಸ್‌ಪೋಸಲ್ ಕಮಿಟಿ ಸದಸ್ಯರು ಹಾಗೂ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ. ಮತ್ತು ಅರವಿಂದ ಕಲಗುಜ್ಜಿ ಹಾಗೂ ಇತರ ಪೊಲೀಸ್ ಅಧಿಕಾರಿಯವರು ಉಪಸ್ಥಿತರಿದ್ದರು.
ಇನ್ನು ಮಣಿಪಾಲ ಠಾಣೆಯ ಸೆನ್ ಠಾಣೆಯ 3 ಪ್ರಕರಣ, ಮಣಿಪಾಲ ಠಾಣೆಯ 4 ಪ್ರಕರಣ ಹಾಗೂ ಕುಂದಾಪುರ, ಕೋಟ, ಮಲ್ಪೆ ಮತ್ತು ಪಡುಬಿದ್ರಿ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 11 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಮಾನ್ಯ ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ.