March 10, 2026
WhatsApp Image 2026-03-10 at 1.44.56 PM

ಉಡುಪಿ: ನಗರದ ಹೊರವಲಯದ ದೊಂದೂರುಕಟ್ಟೆಯ ಮಣಿಪುರ ಗ್ರಾಮದ ಅರಬಿ ಕನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ.

ವನಜಾ ಪೂಜಾರ್ತಿ (60) ಕೊಲೆಯಾದ ಮಹಿಳೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿಗಳಾದ ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್‌ ಮೆಂಡೊನ್ಸಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಲೇರಿಯನ್ ಮೆಂಡೊನ್ಸಾ ಹಾಗೂ ಪ್ರವೀಣ್ ಮೆಂಡೊನ್ಸಾ ಅವರು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾಗಿದ್ದು, ವನಜಾ ಪೂಜಾರ್ತಿಯವರೊಂದಿಗೆ ಆಗಾಗ್ಗೆ ಇವರಿಬ್ಬರು ಮದ್ಯಪಾನ ಮಾಡುತ್ತಿದ್ದರು.

ಮಾರ್ಚ್ 9 ರಂದು ಸಂಜೆ 5 ಗಂಟೆಯಿಂದ ಮಾರ್ಚ್ 10 ರಂದು ಬೆಳಿಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್‌ ಮೆಂಡೊನ್ಸಾ ಅವರು ವನಜಾ ಪೂಜಾರ್ತಿಯನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 33/2026 ಅಡಿಯಲ್ಲಿ ಕಲಂ 103 BNS ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.