ಉಡುಪಿ: ಆಳ್ವಾಸ್ ಕಾಲೇಜಿನ ಸಿಎ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಉಡುಪಿ: ಸಿಎ ಓದುತ್ತಿದ್ದ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಹೆರ್ಗದಲ್ಲಿ ನಡೆದಿದೆ.

ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಈ ಯುವತಿ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು.
ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ತಂದೆತಾಯಿಯೊಂದಿಗೆ ಇದ್ದ ಶ್ರೀನಿಧಿ ಶೆಟ್ಟಿ, ಮನೆಯ ರೂಮ್​ನಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ

Check Also

ಮಂಗಳೂರು: ವಿಡಿಯೋ ಲೈಕ್ ಮಾಡಿ 5 ಲಕ್ಷ ಕಳೆದುಕೊಂಡರು..!

ಮಂಗಳೂರು: ಆನ್‌ಲೈನ್ ಗಳಿಕೆಯ ನಕಲಿ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬರು 5 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೆ. 28ರಂದು ದೂರುದಾರರು ಇನ್ …

Leave a Reply

Your email address will not be published. Required fields are marked *

You cannot copy content of this page.