

ಬ್ರಹ್ಮಾವರ: ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದ ಮನನೊಂದು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಚೇರ್ಕಾಡಿ ಗ್ರಾಮದ ಜೋಸೆಫ್ ಡಿಸೋಜ ಎಂಬವರ ಪತ್ನಿ ಸೆಲಿನ್ ಡಿಸೋಜ(46) ಎಂದು ಗುರುತಿಸಲಾಗಿದೆ.
ಸೆಲಿನ್ ಡಿಸೋಜ(46) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.9ರಂದು ಸಂಜೆ ಮನೆಯ ಹಾಲ್‌ನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.