March 17, 2026
WhatsApp Image 2024-05-30 at 6.03.22 PM

ಮಣಿಪಾಲ: ಗಾಂಜಾ ಮಾರಾಟದ ಬಗ್ಗೆ ಹಫ್ತಾ ನೀಡುವಂತೆ ಒತ್ತಾಯಿಸಿ ಯುವಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಿದ ಘಟನೆ ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಉದ್ಯಾವರ ಕಂಪನ್‌ಬೆಟ್ಟು ನಿವಾಸಿ ಮೊಹಮ್ಮದ್‌ ಪರ್ವೇಜ್‌ ಉಮರ್‌ (25)ಗೆ ಪರಿಚಯದ ಪೈಝಲ್‌ ಕರೆ ಮಾಡಿ ನಿನ್ನ ಬಳಿ ಮಾತನಾಡಲು ಇದೆ ಎಂದು ಮಣಿಪಾಲಕ್ಕೆ ಕರೆಸಿಕೊಂಡಿದ್ದಾನೆ. ಪೈಝಲ್‌ ಜತೆಗೆ ದಾವುದ್‌ ಇಬ್ರಾಹಿಂ, ಇಸಾಕ್‌ ಮೂವರು ಜತೆಗೆ ಸೇರಿ ಪರ್ವೇಜ್‌ ಉಮರ್‌ನನ್ನು ಬಲತ್ಕಾರದಿಂದ ಕಾರಿನಲ್ಲಿ ಎಳೆದು ಹಾಕಿಕೊಂಡು ಅಪರಿಚಿತ ಜಾಗಕ್ಕೆ ಕೊಂಡೊಯ್ದಿದ್ದಾರೆ. ಅನಂತರ ಪರ್ವೇಜ್‌ ಉಮರ್‌ಗೆ ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯ ಎಂದು ನಮಗೆ ಮಾಹಿತಿ ಬಂದಿದ್ದು, ಮಣಿಪಾಲದಲ್ಲಿ ನೀನು ಗಾಂಜಾ ಮಾರಾಟ ಮಾಡಿದರೆ ನಮಗೆ ತಿಂಗಳ ಮಾಮೂಲಿ ಹಣ ಕೊಡಬೇಕು. ಇದಕ್ಕೆ ಒಪ್ಪದದ್ದಿರೆ ನಿನ್ನನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಸಿದ್ದಾರೆ. ಜತೆಗೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ಅನಂತರ ನೀವು ಹೇಳಿದ ಹಾಗೇ ಕೇಳುತ್ತೇನೆ ನನ್ನನ್ನು ಬಿಟ್ಟುಬಿಡಿ ಎಂದಿದ್ದಕ್ಕೆ ಬೆಳಗಿನ ಜಾವ ಅವರ ಮನೆ ಬಳಿ ಬಿಟ್ಟು ಹೋಗಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾರೆ ಎಂದು ಪರ್ವೇಜ್‌ ದೂರು ನೀಡಿದ್ದಾರೆ. ತಂಡದಲ್ಲಿದ್ದ ದಾವೂದ್‌ ಇಬ್ರಾಹಿಂ ಎಂಬವನು ಪರ್ವೇಜ್‌ಗೆ ದೊಣ್ಣೆಯಿಂದ ಕಾಲಿಗೆ, ಕೈಗೆ, ಬೆನ್ನಿಗೆ ಹೊಡೆದಿದ್ದು, ಅದೇ ಕೋಲಿನಿಂದ ಇಸಾಕ್‌ ಬೆನ್ನಿಗೆ ಮತ್ತು ಕಾಲಿಗೆ ಹೊಡೆದಿದ್ದಾನೆ. ಫೈಝಲ್‌ ಕೈಯಿಂದ ಕೆನ್ನೆಗೆ, ಬೆನ್ನಿಗೆ ಹೊಡೆದು ಕಾಲಿನಿಂದ ತುಳಿದು ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.