ಉಡುಪಿ: ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ಯುವತಿ ಶಫಿರಾ ಅರೆಸ್ಟ್..!

ಉಡುಪಿ: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಅಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಪ್ಪಿನಂಗಡಿ ಮೂಲದ ಶಫೀರಾ (21) ಎಂದು ಗುರುತಿಸಲಾಗಿದೆ.

ಬಂಧಿತೆಯು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಬಂಧಿತೆ ಶಫೀರಾ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಈ ಗರುಡ ಗ್ಯಾಂಗ್‌ನ ಸದಸ್ಯರು ಕೆಲ ದಿನಗಳ ಹಿಂದೆ ಉಡುಪಿ-ಮಣಿಪಾಲ ಹೆದ್ದಾರಿಯಲ್ಲಿ ರಸ್ತೆಗಿಳಿದು ಕೊಲೆಗೆ ಯತ್ನಿಸಿದ್ದರು. ನಗರದಲ್ಲಿ ತಡರಾತ್ರಿ ಕತ್ತಿ ಮತ್ತಿತರ ಆಯುಧಗಳೊಂದಿಗೆ ಬೀದಿ ಕಾಳಗ ನಡೆಸಿದ್ದರು.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.