ಉಡುಪಿ: ಗುಂಡಿಬೈಲು ಪಾಡಿಗಾರ ಎಂಬಲ್ಲಿ ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಗೋವಿಂದ (50) ಎಂದು ಗುರುತಿಸಲಾಗಿದೆ.
ಮನೆಗೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದ ಗೋವಿಂದ ಅವರಿಗೆ ಕಲ್ಸಂಕ ಕಡೆಯಿಂದ ಗುಂಡಿಬೈಲ್ ಕಡೆಗೆ ಹೋಗುತ್ತಿದ್ದ ಬುಲೆಟ್ ಢಿಕ್ಕಿ ಹೊಡೆಯಿದ್ದು, ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗೋವಿಂದ ಜಿಲ್ಲಾಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇನ್ನು ಅಪಘಾತ ದಿಂದ ಬುಲೆಟ್ ಸವಾರ ದರ್ಶಿತ್ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.