

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಶ್ರೀಗಳು ಹಲಸಿನ ಮರವೇರಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗುತ್ತಿದೆ.
ಲೋಕ ಸಂಚರಿಸುತ್ತಾ ಧರ್ಮ ಜಾಗೃತಿ ಮೂಡಿಸುತ್ತಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ.
ಮಠದ ಗೋಶಾಲೆಗೆ ಭೇಟಿ ನೀಡಿದ ಸಂದರ್ಭ ಅಲ್ಲೇ ಇದ್ದ ಮರದಲ್ಲಿ ಹಲಸಿನ ಹಣ್ಣುಗಳನ್ನು ಕಂಡ ಅವರು, ಶಲ್ಯ ತಲೆಗೆ ಸುತ್ತಿ ಕೈಯಲ್ಲೊಂದು ಕತ್ತಿ ಹಿಡಿದು ಮೂವತ್ತು ಅಡಿ ಎತ್ತರವಿರುವ ಮರವನ್ನು ನಿರಾಯಾಸವಾಗಿ ಏರಿದರು. ಸುಮಾರು 10 ಹಲಸಿನ ಹಣ್ಣುಗಳನ್ನು ಕೊಯ್ದು ಹಸುಗಳಿಗೆ ನೀಡಿದರು.