ಉಡುಪಿ ಮಂಗಳಮುಖಿಯರ ಅನೈತಿಕ ಚಟುವಟಿಕೆ ವಿರುದ್ದ ಎಸ್ಪಿ ಕಾರ್ಯಾಚರಣೆ

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ಮಂಗಳಮುಖಿಯರು ತೊಡಗಿಕೊಂಡಿರುವ ಕುರಿತಂತೆ ದೂರಿನ ಹಿನ್ನಲೆ ಸ್ವತಃ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ಕಾರ್ಯಾಚರಣೆ ನಡೆಸಿ ಇಬ್ಬರು ಪಿಂಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕೆಲವು ಮಂಗಳಮುಖಿಯರು, ವಾಹನಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ, ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಎಸ್ಪಿ ಈ ಕಾರ್ಯಾಚರಣೆಗೆ ಇಳಿದಿದ್ದರು.

ಸ್ವತಃ ಎಸ್ಪಿಯವರೇ ಸ್ಥಳಕ್ಕೆ ಆಗಮಿಸಿ ಮಂಗಳಮುಖಿಯನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದರು. ಎಸ್ಪಿ ಎಂಬುದನ್ನು ತಿಳಿಯದ ಕೆಲವು ಮಂಗಳಮುಖಿಯರು ಎಸ್ಪಿ ಜೊತೆ ವಾಗ್ವಾದಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ಬೈದರೆನ್ನಲಾಗಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಲ್ಲರನ್ನು ಚದುರಿಸಿದರು. ಈ ವೇಳೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಗ್ರಾಹಕರನ್ನು ರಿಕ್ಷಾದಲ್ಲಿ ಕರೆ ತಂದು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಮಂಗಳೂರು: ಪಿಎಂ ಇಜಿಪಿ, ಮುದ್ರಾಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಸಂಸದ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂ ಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು …

Leave a Reply

Your email address will not be published. Required fields are marked *

You cannot copy content of this page.