ಮಣಿಪಾಲ: ಕಾಲೇಜು ಕಟ್ಟಡದ 6ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ  ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಣಿಪಾಲದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ.

ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್(20) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಮಾಹೆಯ ಎಂಸಿಎಚ್ ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿಯಾಗಿದ್ದರು. ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಫೋನ್ ಬಳಸುತ್ತಿರುವುದನ್ನು ಪರೀಕ್ಷಾ ಮೇಲ್ವಿಚಾರಕರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮನ್ ರನ್ನು ಪರೀಕ್ಷಾ ಮೇಲ್ವಿಚಾರಕರು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.