March 20, 2026
WhatsApp Image 2025-12-17 at 1.26.26 PM

ಬ್ರಹ್ಮಾವರದ ಯುವತಿ ಅಕ್ಷತಾ ಪೂಜಾರಿ ಮೇಲೆ ನಡೆದ ಹಲ್ಲೆಯನ್ನು ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಖಂಡಿಸಿದ್ದಾರೆ.

ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಅಕ್ಷತಾ ಪೂಜಾರಿ ಅವರ ಮೇಲೆ ಹಲ್ಲೆ ನಡೆಸಿ, ಯುವತಿಯ ಮೇಲೆಯೇ ಕರ್ತವ್ಯ ಲೋಪದ ಆರೋಪದಡಿ ಪ್ರಕರಣ ದಾಖಲಿಸಿರುವುದು ಎಷ್ಟು ಸರಿ ಎಂಬ ಪ್ರಶ್ನಿಸಿದ್ದಾರೆ.

ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕಾದ ಪೊಲೀಸರೇ ಈ ರೀತಿಯಲ್ಲಿ ವರ್ತಿಸಿರುವುದು ಇಲಾಖೆಯ ಮೇಲಿನ ಜನರ ನಂಬಿಕೆಗೆ ಧಕ್ಕೆ ತರುವಂತಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿದ್ದು, ತಕ್ಷಣವೇ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಸ್ತಕ್ಷೇಪ ಮಾಡಿ ತಪ್ಪಿತಸ್ಥ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.  ಪೊಲೀಸ್ ಇಲಾಖೆ ಪಾರದರ್ಶಕತೆ ಮತ್ತು ನ್ಯಾಯದ ತತ್ವಗಳನ್ನು ಪಾಲಿಸಬೇಕೆಂದು ಒತ್ತಾಯಿಸಿದ ಅವರು, ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸುವಂತೆ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.