ಉಡುಪಿ : ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ನಿಯಂತ್ರಣ ತಪ್ಪಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಮಡು ಟ್ರಕ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಸಾಲಿಗ್ರಾಮ ಸಮೀಪದ ಸಮಿತ್ ಕುಮಾರ್ ಎಮ್ ಜಿ (19) ಮತ್ತು ವಾಗೀಶ್ ಕೆದ್ಲಾಯ (19) ಎಂದು ಗುರುತಿಸಲಾಗಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.