February 18, 2026
WhatsApp Image 2026-02-18 at 1.57.57 PM

ಉಡುಪಿಯ ಪೆರಂಪಳ್ಳಿಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮೇಲೆ ಕ್ರೇನ್ ಹರಿದ ಭಯಾನಕ ವೀಡಿಯೊವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪೆರಂಪಳ್ಳಿಯಲ್ಲಿರುವ ಹೆರ್ಗಾ ವ್ಯವಸಾಯ ಸೇವಾ ಸೊಸೈಟಿಯ ಮುಂಭಾಗ ಈ ಘಟನೆ ನಡೆದಿದ್ದು, ಕ್ರೇನ್ ಚಾಲಕ ವಾಹನವನ್ನು ತಿರುಗಿಸಿ, ಮುಂದೆ ಬರುತ್ತಿದ್ದ ಕಾರಿಗೆ ದಾರಿ ಮಾಡಿಕೊಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮೇಲೆ ಕ್ರೇನ್ ಹರಿದಿದೆ. ಕ್ರೇನ್‌ನ ಚಕ್ರದ ಕೆಳಗೆ ಸಿಲುಕಿಕೊಂಡಿದ್ದ ಆ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತ ನಡೆದ ನಂತರ ಕ್ರೇನ್ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.