April 15, 2026
WhatsApp Image 2026-02-18 at 9.15.14 AM

ಮಲ್ಪೆ : ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಹಂಚಿಕೊಂಡು ಅಕ್ರಮ ಲಾಭ ಪಡೆದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಪಶ್ಚಿಮ ಬಂಗಾಳ ಮೂಲದ, ಪ್ರಸ್ತುತ ಕೇರಳದ ಇಡುಕಿ ಜಿಲ್ಲೆಯ ಮರಾಯು ಗ್ರಾಮದ ಆಲಿಫ್ ಇಸ್ಲಾಮ್ (21) ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಇದಕ್ಕೂ ಮುನ್ನ 2025ರ ಡಿಸೆಂಬರ್ 21ರಂದು ಗುಜರಾತ್‌ನ ಹೀರೇಂದ್ರ ಕುಮಾರ್ ಹಾಗೂ 2025ರ ನವೆಂಬರ್ 21ರಂದು ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು.

ಆರೋಪಿಗಳು ಭಾರತೀಯ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್‌ಗಳ ಗೌಪ್ಯ ಪಟ್ಟಿ ಸೇರಿದಂತೆ ಇತರ ರಹಸ್ಯ ಮಾಹಿತಿಗಳನ್ನು ವಾಟ್ಸಾಪ್ ಹಾಗೂ ಫೇಸ್‌ಬುಕ್ ಮೂಲಕ ಪಾಕಿಸ್ತಾನಕ್ಕೆ ಅನಧಿಕೃತವಾಗಿ ರವಾನಿಸಿ ಅಕ್ರಮ ಲಾಭ ಪಡೆದಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ಐದನೇ ಆರೋಪಿ ಆಲಿಫ್ ಇಸ್ಲಾಮ್‌ನನ್ನು ಫೆ. 16ರಂದು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆ. 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.