ಕುಕ್ಕರ್ ಬಾಂಬ್ ಪ್ರಕರಣ: ಉಡುಪಿ ಕೃಷ್ಣ ಮಠ ಬ್ಲಾಸ್ಟ್​ಗೆ ಪ್ಲಾನ್- ಎನ್​ಐಎ ತನಿಖೆಯಲ್ಲಿ ಬಯಲು

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಭಯಾನಕ ಅಂಶ ಬಾಯಿಬಿಟ್ಟಿದ್ದಾನೆ.

ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್​​ ಬ್ಲಾಸ್ಟ್​ ಮಾಡಲು ಸಂಚು ರೂಪಿಸಿದ್ದೇವು ಎಂದು ಹೇಳಿದ್ದಾನೆ. ಕದ್ರಿ ದೇವಸ್ಥಾನ ಟಾರ್ಗೇಟ್ ಮಾಡಲಾಗಿತ್ತು ಎಂದು ಈ ಹಿಂದೆ ಹೇಳಿದ್ದ. ಇದೀಗ ಉಡುಪಿ ಮಠ, ಚಿಕ್ಕಮಗಳೂರಿನ ಬಿಜೆಪಿ ಕಚೇರಿಯನ್ನೂ ಕೂಡ ಟಾರ್ಗೆಟ್ ಮಾಡಲಾಗಿತ್ತು ಎಂದು ಹೇಳಿದ್ದಾನೆ. ಕದ್ರಿ ಬ್ಲಾಸ್ಟ್ ಸಕ್ಸಸ್ ಆಗಿದ್ದರೇ ನಂತರ ಉಡುಪಿ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿಯನ್ನು ಬ್ಲಾಸ್ಟ್​ ಮಾಡುತ್ತಿದ್ದೇವು. ಆದರೆ ಕದ್ರಿ ದೇವಸ್ಥಾನ ತಲುಪುವ ಮುನ್ನವೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಹೀಗಾಗಿ ಉಡುಪಿ ಕೃಷ್ಣ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್ ಪ್ಲಾನ್ ಪ್ಲಾಫ್ ಆಗಿದೆ ಎಂದು ಹೇಳಿರುವುದು ಎನ್‌ ಐ ಎ ತನಿಖೆಯಲ್ಲಿ ಬಯಲಾಗಿದೆ ಎಂದು ತಿಳಿದು ಬಂದಿದೆ.

Check Also

ಉಡುಪಿ: ಆಟೋರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರಿಗೆ ಗಾಯ

ಉಡುಪಿ: ಆಟೋರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಉಡುಪಿಯ ಜಾಕೀರ್‌ ಹುಸೇನ್‌ ಅವರು ರಿಕ್ಷಾದಲ್ಲಿ ಅಂಬಾಗಿಲು …

Leave a Reply

Your email address will not be published. Required fields are marked *

You cannot copy content of this page.