March 10, 2026
WhatsApp Image 2025-11-18 at 12.49.19 PM

ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಅವರನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ರತ್ನಾಕರ್ ಅಮೀನ್ ಅವರು ತಿರುಪತಿಯಿಂದ ಹಿಂತಿರುಗುತ್ತಿದ್ದ ವೇಳೆ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬAಧಿಸಿ ನ. 15ರಂದು ಉಡುಪಿಯಲ್ಲಿ ನಡೆದ ಪ್ರತಿಭಟನಾಸಭೆಯಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ್ ಅಮೀನ್ ಅವರು ದ್ವೇಷ ಭಾಷಣ ಮಾಡಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ರತ್ನಾಕರ್ ಅಮೀನ್ ಅವರನ್ನು ಬಂಧಿಸಿರುವ ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಜಾಗರಣ ವೇದಿಕೆಯ ತಾಲೂಕು ಸಂಚಾಲಕ ಸುಜಿತ್ ಸೇರಿದಂತೆ ಪ್ರಮುಖ ಮುಖಂಡರು ಪೊಲೀಸರ ಈ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.