ಕುಂದಾಪುರ: ಕೋಡಿ ಸಮುದ್ರ ತೀರದಲ್ಲಿ ಅಂಬರ್ ಗ್ರೀಸ್ ಮಾರಾಟದ ಬಗ್ಗೆ ( ತಿಮಿಂಗಿಲ ವಾಂತಿ) ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಗೆ ಮಾರುವೇಷದಲ್ಲಿ ಬಂದ ಸಿಐಡಿ ಅಧಿಕಾರಿಗಳ ಬಗ್ಗೆ ಸ್ಥಳೀಯರು ತಪ್ಪು ಗ್ರಹಿಕೆಯಿಂದಾಗಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ಎಂ. ಕೋಡಿಯಲ್ಲಿ ನಡೆದಿದೆ.
ಕೋಡಿಯಲ್ಲಿ ಅಂಬರ್ ಗ್ರೀಸ್ ಡೀಲ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾರುವೇಷದಲ್ಲಿ ಮೂರು ಕಾರಿನಲ್ಲಿ ಬಂದ ಅರಣ್ಯ ಇಲಾಖೆ, ಸಿಐಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಕಾರಿಗೆ ತುಂಬುವ ವೇಳೆ ಸ್ಥಳೀಯರ ತಪ್ಪು ಗ್ರಹಿಕೆಯಿಂದ ಅಧಿಕಾರಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆನ್ನಲಾಗಿದೆ.
ಆ ವೇಳೆ ಸುತ್ತಮುತ್ತಲಿನ ಜನ ಸೇರಿದ್ದರಿಂದ ತಳ್ಳಾಟ ನಡೆದಿದೆನ್ನಲಾಗಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳಾದ ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ಟೌನ್ ಎಸ್ಐ ನಂಜ ನಾಯ್ಕ ಹಾಗೂ ಸಿಬ್ಬಂದಿಗಳು ಸಿಐಡಿ ಅಧಿಕಾರಿಗಳನ್ನು ಸ್ಥಳಾಂತರಿಸಿದರು.