

ಉಡುಪಿ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಮೃತ ಬೈಕ್ ಸವಾರ ಬಾದಮಿ ತಾಲೂಕಿನ ಬಸಪ್ಪ (30) ಎಂದು ತಿಳಿದುಬಂದಿದೆ. ಬಸ್ ಉಡುಪಿಯಿಂದ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದ ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
.