
ಪಡುಬಿದ್ರೆ: ಕೂಲಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯೋರ್ವರು ಮನೆಗೆ ಹಿಂದಿರುಗುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಚಂದ್ರಶೇಖರ್ (೫೨) ಮೃತ ದುರ್ದೈವಿಯಾಗಿದ್ದಾರೆ. ಇವರು ಎಂದಿನಂತೆ ಸಂಜೆ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಟ ಆರಂಭಿಸಿದ್ದಾರೆ.
ಆ ಸಂದರ್ಭ ಕಲ್ಲಟ್ಟೆ ಸೇತುವೆ ಬಳಿಯ ಗದ್ದೆಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಇವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
