![WhatsApp Image 2024-09-20 at 3.13.59 PM](https://i0.wp.com/thrishulnews.com/wp-content/uploads/2024/09/WhatsApp-Image-2024-09-20-at-3.13.59-PM.jpeg?fit=1000%2C600&ssl=1?v=1726825450)
![](https://i0.wp.com/thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg?fit=1050%2C600&ssl=1)
ಉಡುಪಿ: ದೀಪಾವಳಿ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್ 2ರ ವರೆಗೆ ಮಾತ್ರ) ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರಿಂದ ಪರವಾನಿಗೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಜಿಲ್ಲಾಧಿಕಾರಿಗಳ ಕಚೇರಿಯಿಂದ ನಮೂನೆ ಪಡೆದು ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಗೆ ಎಲ್ಲ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಪೇಕ್ಷಣ ಪತ್ರ ಪಡೆದು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕವಾಗಿ ಸುಡುಮದ್ದು ಮಾರಾಟ ಪರವಾನಿಗೆ ಸಿಗಲಿದೆ. ಅರ್ಜಿಗಳನ್ನು ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು ಅಕ್ಟೋಬರ್ 15ರ ಒಳಗೆ ಸಲ್ಲಿಸಬೇಕು. ತಾಲೂಕು ಮಟ್ಟದ ಸಮಿತಿ ನಿಗದಿಪಡಿಸುವ ಸಾರ್ವಜನಿಕ ವಸತಿ ಹಾಗೂ ಅಂಗಡಿ ಇರುವ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ಮಾರಾಟ ಮಳಿಗೆಗಳನ್ನು ತೆರೆಯಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.