
ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಬಂಧನ ಖಂಡಿಸಿ ಇಂದು ಮಧ್ಯಾಹ್ನ 3.00 ಗಂಟೆಗೆ, ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಪಕ್ಷದ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಅವರ ಕಾನೂನು ಬಾಹಿರ ಮತ್ತು ದುರುದ್ದೇಶಪೂರ್ವಕ ಬಂಧನವನ್ನು ಖಂಡಿಸಿ, ಇಂದು ಶುಕ್ರವಾರ ಮಧ್ಯಾಹ್ನ 3.00 ಗಂಟೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ.
