March 22, 2026
WhatsApp Image 2024-01-21 at 9.20.00 AM

ಉಡುಪಿ: ಟಾಸ್ಕ್ ನೀಡಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಮತ್ತೊಂದು ಪ್ರಕರಣ ನಡೆದಿದ್ದು ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ತೂರಿನ ಪ್ರತ್ಯಕ್ಷ (31) ಎಂಬವರಿಗೆ ಅಪರಿಚಿತ ವ್ಯಕ್ತಿಗಳು ರಿವಿವ್ ಟಾಸ್ಕ್ ಹಾಗೂ ಕ್ರಿಪ್ಟೋ ಕರೆನ್ಸಿಯಿಂದ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಟೆಲಿಗ್ರಾಂ ಆ್ಯಪ್‌ನ ಲಿಂಕ್ ಕಳುಹಿಸಿದ್ದರು. ಹೆಚ್ಚಿನ ಲಾಭಾಂಶವನ್ನು ನೀಡುವುದಾಗಿ ನಂಬಿಸಿ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಾಗೂ ಯುಪಿಐ ಐಡಿಗಳಿಗೆ ಜನವರಿ 13ರಿಂದ ಹಂತ ಹಂತವಾಗಿ ಒಟ್ಟು 6,16,500ರೂ. ಹಣವನ್ನು ಪಾವತಿಸಿದ್ದರು. ಆದರೆ ಪ್ರತ್ಯಕ್ಷ ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೇ ನಂಬಿಸಿ, ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.