

ಉಡುಪಿ: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಉಡುಪಿಯ ರಾ.ಹೆ.66ರ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಕಾರಿನಲ್ಲಿದ್ದ ನಾಗರಾಜ್, ಅಭಿಜಿತ್ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ.
ಸಂತೆಕಟ್ಟೆಯ ಖಾಸಗಿ ಸೊಸೈಟಿಯ ಸಿಬ್ಬಂದಿ ಕಾರಿನಲ್ಲಿ ಉಡುಪಿಯಿಂದ ಸಂತೆಕಟ್ಟೆ ಶಾಖೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳೀಯರು ಟಿಪ್ಪರ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಉಡುಪಿ ಸಂಚಾರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.