ಉಡುಪಿ: ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ಶನಿವಾರ ಮುಂಜಾನೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಬವಿಸಿಲ್ಲ ಎಂದು ತಿಳಿದು ಬಂದಿದೆ.
ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿದೆ ಎಂದು ತಿಳಿದು ಬಂದಿದೆ.
ನಿದ್ದೆ ಮಂಪರಿನಿಂದ ಚಾಲಕನಿಗೆ ನಿಯಂತ್ರಣ ತಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.