

ಉಡುಪಿ: ಹಿರಿಯಡ್ಕ ಸಮೀಪದ ಓಂತಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ನಡೆದ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡ ಘಟನೆ ಸಂಭವಿಸಿದೆ. ಹಿರಿಯಡ್ಕದಿಂದ ಆತ್ರಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಒಂದಕ್ಕೆ ಡಿಕ್ಕಿ ಹೊಡಿದಿತ್ತು.
ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಟಿಪ್ಪರ್ ಚಾಲಕ ತನ್ನ ವಾಹನದಲ್ಲಿ ಸಿಲುಕಿಕೊಂಡಿದ್ದ. ಸ್ಥಳೀಯರು ಅತನನ್ನು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಾತ್ರವಲ್ಲ, ಬಸ್ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯವಾಗಿದೆ.ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.