

ಚಿಕ್ಕಮಗಳೂರು : ರಸ್ತೆ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ಯುವಕನೊಬ್ಬ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಬಳಿಯ ಸಾಲುಮರ ಗ್ರಮದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ವಿಘ್ನೇಶ್ ಆತ್ಮಹತ್ಯೆ ಮಾಡಿಕೊಂಡಿಇರುವ ಯುವಕ.
ಕೊಪ್ಪ ತಾಲೂಕಿನ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷ ವ್ಯಾಸಂಗ ಮಾಡುತ್ತಿದ್ದ. ನಾಲ್ಕು ವರ್ಷಗಳ ಹಿಂದೆ ವಿಘೇಷ್ ಗೆ ಅಪಘಾತವಾಗಿತ್ತು. ಈ ವೇಳೆ 17 ಹಲ್ಲುಗಳನ್ನು ಕಳೆದುಕೊಂಡಿದ್ದ. ಹಾಗಾಗಿ ಆಗಾಗ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದ. 17 ಹಲ್ಲುಗಳನ್ನು ಕಳೆದುಕೊಂಡ ದು:ಖ ಜೊತೆಗೆ ಪದೇ ಪದೇ ಆಸ್ಪತ್ರೆಯ ಖರ್ಚು ಇದರಿಂದ ಖಿನ್ನತೆಯಿಂದ ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.