
ಕುಂದಾಪುರ: ಕಮಲಶಿಲೆ ದೇವಸ್ಥಾನದ ಗೋಶಾಲೆಯ ದನಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಸೆಕ್ಯೂರಿಟಿ ಗಾರ್ಡ್ ರಾಜು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು. ವಾಜೀದ್ ಜೆ (26) ಮತ್ತು ಫೈಜಲ್ (40) ಬಂಧಿತರು. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಹುಂಡೈ ಕ್ರೆಟಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
