ಉಡುಪಿ: ಕರಾವಳಿಯಲ್ಲಿ ಮುಂಗಾರು ಮಳೆ ತನ್ನ ಅಬ್ಬರ ತೋರಿಸಲು ಪ್ರಾರಂಭಿಸಿದ್ದು. ಇದೀಗ ಉಡುಪಿಯಲ್ಲಿ ಸುರಿದ ಮಳೆಗೆ ಕೆಲವು ಕಡೆ ಹಾನಿಯುಂಟಾಗಿದೆ. ಉಡುಪಿಯಲ್ಲಿ ಸುರಿದ ಜಡಿ ಮಳೆಗೆ ಮನೆಯೊಂದರ ಮೇಲೆ ಪಕ್ಕದ ಮನೆಯ ಆವರಣ ಗೋಡೆ ಕುಸಿದು ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಅಲೆವೂರು ಗ್ರಾಮದ ಪ್ರಗತಿ ನಗರದಲ್ಲಿ ನಡೆದಿದೆ.ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆ ಮಾಲಕಿ ಸುಮಾ ರಮೇಶ್ ಆಚಾರ್ಯ ಬೆಕ್ಕಿಗೆ ತಿಂಡಿ ಹಾಕಲು ಹೊರ ಬಂದಿದ್ದಾಗ ಈ ಘಟನೆ ನಡೆದಿದ್ದರಿಂದ ಅವರು ಜೀವಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Check Also
ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ
ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …