
ಉಡುಪಿ:ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ (ಮಂಗಳವಾರ) ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆಗೆ ನದಿ, ಹಳ್ಳಗಳಲ್ಲಿ ಹೆಚ್ಚಿನ ನೀರಿನ ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಆದೇಶಿಸಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.