March 11, 2026
WhatsApp Image 2023-11-24 at 1.46.28 PM

ಡುಪಿ : ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸೋಮೇಶ್ವರ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.

ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಲಾರಿ ಕಾರ್ಮಿಕ ಶಿವರಾಜ್ ಎಂಬುವವರ ಮೇಲೆ ಟಿಪ್ಪರ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುತ್ತಿದೆ.

ಟಿಪ್ಪರ್ ಚಾಲಕ ಪೆಟ್ರೋಲ್ ಹಾಕಿಸಿಕೊಂಡು ಹೋಗುವಾಗ ಪೆಟ್ರೋಲ್ ಬಂಕ್ ಮಲಗಿದ್ದ ಕಾರ್ಮಿಕನ ಮೇಲೆಯೇ ಚಾಲಕ ಟಿಪ್ಪರ್ ಹರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿವಮೊಗ್ಗ ಮೂಲದ ಕಾರ್ಮಿಕ ಶಿವರಾಜ್ ನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾದರೂ ಅಷ್ಟರಲ್ಲೇ ಆತ ಮೃತಪಟ್ಟಿದ್ದನು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.