

ಉಡುಪಿ: ಅಂತರ ಜಿಲ್ಲಾ ಶಾಲಾ ಕಾಲೇಜು ಕಳ್ಳತನದ ಆರೋಪಿಯನ್ನು ಬಂಧಿಸುವಲ್ಲಿ ಕಾರ್ಕಳ ನಗರ ಪೊಲೀಸ್ ಠಾಣಾ ಎಸ್.ಐ ಶಿವಕುಮಾರ್ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬೈಂದೂರಿನ ಯೋಜನಾ ನಗರ ನಿವಾಸಿ ಅರ್ಷಿತ್ ಅವಿನಾಶ್ ದೋಡ್ರೆ(24) ಬಂಧಿತ ಯುವಕ. ಕೃತ್ಯಕ್ಕೆ ಬಳಸುತ್ತಿದ್ದ ಕಾರು, ಮೊಬೈಲ್ ಮತ್ತು 84500 ರೂ ನಗದು ಬಂಧಿತನಿಂದ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ಬೆಳ್ಮಣ್ ಗ್ರಾಮದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲೆಯ ಕಛೇರಿಯ ಬಾಗಿಲಿಗೆ ಹಾಕಿದ ಬೀಗವನ್ನು ಮುರಿದು 1,50,000 ನಗದು ಮತ್ತು 3 ಡಿವಿಆರ್‌ಗಳನ್ನು ಕಳವು ಮಾಡಿಕೊಂಡು ಹೋಗಿದ್ದಲ್ಲದೆ, ಶಾಲೆಯ ಸಿಸಿಟಿವಿಯನ್ನು ಹಾಳು ಮಾಡಿರುತ್ತಾನೆ.
ನಂದಳಿಕೆ ಗ್ರಾಮದ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರ ಕೊಠಡಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಮುರಿದು, ಒಳಪ್ರವೇಶಿಸಿ ಕಪಾಟಿನ ಬಾಗಿಲು ತೆಗೆದು, ರಿಜಿಸ್ಟರ್ ಗಳನ್ನು ಚಲ್ಲಾಪಿಲ್ಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ.
ಹಿರ್ಗಾನ ಗ್ರಾಮದ ಸಂತ ಮರಿಯಾ ಗೊರಟ್ಟಿ ಆಂಗ್ಲ ಮಾದ್ಯಮ ಶಾಲೆಯ ಕಛೇರಿಯ ಬೀಗವನ್ನು ಯಾರೋ ಕಳ್ಳರು ಒಡೆದು ಒಳಪ್ರವೇಶಿಸಿ, ಕಪಾಟಿನ ಬೀಗವನ್ನು ಮುರಿದು ಅದರಲ್ಲಿದ್ದ ನಗದು 60000 ಮತ್ತು 5000ಮೌಲ್ಯದ ಸಿಸಿ ಕ್ಯಾಮರಾ ಡಿವಿಆರ್ ಕಳವು ಮಾಡಿರುವ ಬಗ್ಗೆ ದಾಖಲಾಗಿತ್ತು.
ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿ ಮತ್ತು ಸ್ವತ್ತು ಪತ್ತೆಯ ಬಗ್ಗೆ ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಡಿ.ಆರ್‌ರವರ ನೇತೃತ್ವದ ಕಾರ್ಕಳ ನಗರ ಪೊಲೀಸ್ ಠಾಣಾ ಪಿಎಸ್ಐ ಶಿವಕುಮಾರ್, ಸಿಬ್ಬಂದಿಯವರಾದ ರಂಜಿತ್, ಶಿವಾನಂದ, ಕಾರ್ಕಳ ಗ್ರಾಮಾಂತರ ಠಾಣಾ ಚಂದ್ರಶೇಖರ, ಅಜೆಕಾರು ಠಾಣಾ ಸತೀಶ, ಪ್ರದೀಪ್‌ರವರನ್ನೊಳಗೊಂಡ ತಂಡ, ಮಾ.20ರಂದು ನಿಟ್ಟೆ ಗ್ರಾಮದ ಸಂತ ಲಾರೆನ್ಸ್ ಫ್ರೌಡ ಶಾಲೆಯ ಸಮೀಪ ಅನುಮಾನಾಸ್ಪದವಾಗಿ ಬಿಳಿ ಬಣ್ಣದ ಕಾರಿನಲ್ಲಿ ಕಂಡು ಬಂದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗಿ ತಪ್ಪನ್ನು ಒಪ್ಪಿಕೊಂಡಿದ್ದಾನೆ., ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂದನಕ್ಕೆ ನೀಡಿರುತ್ತಾರೆ.