March 20, 2026
WhatsApp Image 2024-10-25 at 8.52.09 AM

ಉಡುಪಿ : ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತವೊಂದರಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

 

ಮಾಹಿತಿ ತಿಳಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ತಮ್ಮ ಜೀಪಿನಲ್ಲಿಯೇ ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸುವ ಮೂಲಕ ಬೈಕ್ ಸವಾರರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಬೈಕ್ ಚಲಾಯಿಸುತ್ತಿದ್ದ ನಿಖಿಲ್ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ, ಸಹ ಸವಾರ ಸಂದೀಪ್‌ಗೆ ಪ್ರಜ್ಞೆ ಮರಳಿದೆ. ಈ ಇಬ್ಬರೂ ಪಡುಬಿದ್ರೆ ನಿವಾಸಿಗಳಾಗಿದ್ದಾರೆ. ಉಡುಪಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

About The Author

Leave a Reply

Your email address will not be published. Required fields are marked *

You cannot copy content of this page.