

ಉಡುಪಿ: ಉಡುಪಿಯ ಸಂತೋಷ್ ನಗರ ರಸ್ತೆ ಡಾಂಬರು ಕಿತ್ತು ಹೋಗಿ ತೀವ್ರ ಹದಗೆಟ್ಟಿದೆ. ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಾಗರಿಕರು ನಿತ್ಯ ಪರದಾಡುವಂತಾಗಿದೆ.
ರಸ್ತೆಯು ವರ್ಷಗಳ ಹಿಂದೆ ಡಾಂಬರೀಕರಣಗೊಂಡಿದ್ದು, ಇದೀಗ ಸಂಪೂರ್ಣ ಕಿತ್ತು ಹೋಗಿದೆ. ವಾಹನ ಸವಾರರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಡೆದಾಡಲು ಪರದಾಡುವ ಸ್ಥಿತಿ ಬಂದೊದಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಬರುವುದರಿಂದ ನೀರು ಹೋಗಲು ಚರಂಡಿಯ ವ್ಯವಸ್ಥೆ ಇಲ್ಲದೇ ರಸ್ತೆ ಮೇಲೆ ನೀರು ಹಾದು ಹೋಗುವುದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಅಲ್ಲದೇ ರಸ್ತೆಯ ಇಕ್ಕೆಲಗಳಲ್ಲಿ ಗಿಡ ಗಂಟಿಗಳು ಬೆಳೆದು ಶಾಲಾ ಮಕ್ಕಳಿಗೆ ನಡೆದಾಡಲು ಕಷ್ಟಪಡುವಂತಾಗಿದೆ.
ಈ ಬಗ್ಗೆ ಸ್ಥಳೀಯ ಕಾರ್ಪೋರೇಟರ್ ಗಿರಿಧರ ಆಚಾರ್ಯ ರವರಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ.
ಸ್ಥಳೀಯ ನಾಗರೀಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಇನ್ನಾದರೂ ಇತ್ತ ಗಮನ ಹರಿಸಿ ಸಮಸ್ಯೆ ಬಗೆ ಹರಿಸುವರೇ ಎಂದು ಕಾದು ನೋಡಬೇಕಿದೆ.