
ಗಣೇಶ ಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಆಗಸ್ಟ್ 27ರಂದು ಮದ್ಯ ಮಾರಾಟವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಆದೇಶಿಸಿದ್ದಾರೆ.
ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಉಪ ವಿಭಾಗ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆ, ಗಣೇಶ ವಿಗ್ರಹ ವಿಸರ್ಜನೆ ನಡೆಯಲಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 27ರಂದು ಬೆಳಗ್ಗೆ 6 ಗಂಟೆಯಿ0ದ ಆಗಸ್ಟ್ 28ರಂದು ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಉಡುಪಿ ನಗರ ವ್ಯಾಪ್ತಿಯಲ್ಲಿ ಆಗಸ್ಟ್ 29ರವರೆಗೆ, ಅತೀ ಸೂಕ್ಷ್ಮ ಪ್ರದೇಶದಲ್ಲಿ ಆಗಸ್ಟ್ 31ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
