
ನ.28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಉಡುಪಿ ಕೃಷ್ಣ ಮಠಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ನವೆಂಬರ್ 28ರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಪ್ರವೇಶವನ್ನು ನಿರ್ಬಂಧಿಸಿ ಮಠದ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. ಭಕ್ತರು, ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ಇದಕ್ಕೆ ಸ್ಪಂಧಿಸುವಂತೆ ಮಠದ ಪ್ರಕಟಣೆ ತಿಳಿಸಿದೆ.
