ಉಡುಪಿ: ಗ್ಯಾಂಗ್ ವಾರ್ ಪ್ರಕರಣ; ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 19 ರಂದು ಮುಂಜಾನೆ ಸಂಭವಿಸಿದ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕಾಪು ಕೊಂಬಗುಡ್ಡೆ ಮೂಲದ ಆಶಿಕ್‌, ತೋನ್ಸೆ ಹೂಡೆಯ ರಾಕೀಬ್‌ ಹಾಗೂ ಸಕ್ಲೈನ್‌, ಬ್ರಹ್ಮಾವರದ ಶರೀಫ್, ಕಾಪು ಮೂಲದ ಮಜೀದ್‌, ಅಲಾಝ್ ಪ್ರಕರಣದ ಬಂಧಿತ ಆರೋಪಿಗಳು. ಈ 6 ಮಂದಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗ್ಯಾಂಗ್‌ವಾರ್‌ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿದೂರು ಹಾಗೂ ವೀಡಿಯೋ ಆಧರಿಸಿ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದರು. ಬಳಿಕ ಘಟನೆಗೆ ಸಂಬಂಧ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

Check Also

ಉಡುಪಿ : ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣ – ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು

ಉಡುಪಿ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ …

Leave a Reply

Your email address will not be published. Required fields are marked *

You cannot copy content of this page.