March 21, 2026
WhatsApp Image 2024-06-28 at 9.54.43 AM

ಉಡುಪಿ: ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್ ಪಿ ಮತ್ತು ಮಂಗಳೂರಿನ ಶಶಿರಾಜ್ ಕಾವೂರು ಅವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ. ಪಿ. ರಾವ್ ಅವರು ಪ್ರದಾನ ಮಾಡಿ ರಂಗಭೂಮಿಯಿಂದ ಸಾಮಾಜಿಕ ಬದಲಾವಣೆಯಾಗುತ್ತದೆ. ಬಿ ವಿ ಕಾರಂತರಂತ ಶ್ರೇಷ್ಠ ಕಲಾವಿದರ ರಂಗಭೂಮಿ ಕ್ಷೇತ್ರದ ಕೊಡುಗೆ ಬಗ್ಗೆ ಮಾತನಾಡಿದರು.

ತುಳುಕೂಟ ಉಡುಪಿಯ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ಮತ್ತು
ಕಲಾವಿದ ಮೈಮ್ ರಾಮದಾಸ್ ಅವರು ಸಿಜಿಕೆ‌‌‌ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡರು .

ಸಂಸ್ಕೃತಿ ವಿಶ್ವಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ,‌ ರಂಗಕರ್ಮಿ, ನಮ ತುಳುವೆರ್ ಕಲಾ ಸಂಘಟನೆಯ ಸುಕುಮಾರ್ ಮೋಹನ್ ಮುದ್ರಾಡಿ ಉಪಸ್ಥಿತರಿದ್ದರು.‌ ರಾಜೇಶ್ ಭಟ್ ಪಣಿಯಾಡಿ ವಂದಿಸಿ, ಪೂರ್ಣಿಮಾ ಜನಾರ್ದನ್ ನಿರೂಪಿಸಿದರು.

About The Author

Leave a Reply

Your email address will not be published. Required fields are marked *

You cannot copy content of this page.