ಉಡುಪಿ : ಹಾರ್ನ್ ಹಾಕಿದ್ದಕ್ಕೆ ಎಕ್ಸ್ ಪ್ರೆಸ್ ಬಸ್ ಚಾಲಕನಿಗೆ ಕಾರು ಚಾಲಕನಿಂದ ಹಲ್ಲೆ..!

ಉಡುಪಿ : ಹಾರ್ನ್ ಹಾಕಿ ಓವರ್ ಟೇಕ್ ಮಾಡಿದಕ್ಕೆ ಕಾರು ಚಾಲಕನೊಬ್ಬ ಬಸ್ಸನ್ನು ಅಡ್ಡಗಟ್ಟಿ  ಬಸ್ ಡ್ರೈವರಿಗೆ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಇರಿತಕ್ಕೊಳಗಾದ ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಮಾಸ್ಟರ್ ಹೆಸರಿನ ಎಕ್ಸ್ ಪ್ರೆಸ್ ಬಸ್  ಪಡುಬಿದ್ರೆ ಯ ಎರ್ಮಾಳ್ ಬಳಿ ಮುಂದಿನಿಂದ ಹೋಗುತ್ತಿದ್ದ ಕಾರು ಚಾಲಕನಿಗೆ ಹಾರ್ನ್ ಹಾಕಿ ಓವರ್ ಡೇಕ್ ಮಾಡಲು ಯತ್ನಿಸಿದ್ದಾನೆ. ಬಸ್ಸಿನ ಕರ್ಕಶ ಹಾರ್ನ್‌ಗೆ  ಆಕ್ರೋಶಗೊಂಡ ಕಾರು ಚಾಲಕ ಬಸ್ಸನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿ ಬಳಿಕ ಬಸ್ಸಿನಿಂದ ಇಳಿದು ಪರಾರಿಯಾಗಿದ್ದಾನೆ ಎಂದು  ಹೇಳಲಾಗಿದೆ. ಗಾಯಗೊಂಡ ಬಸ್ ಚಾಲಕನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಬಗ್ಗೆ ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ .

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.