March 20, 2026
WhatsApp Image 2025-08-29 at 10.46.42 AM

ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿಯೊಂದು ಮಗುಚಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ನಡೆದಿದೆ.

ಅಬ್ಬರದ ಅಲೆಗಳಿಂದಾಗಿ ದೋಣಿ ಮಗುಚಿ ಬಿದ್ದಿದ್ದು, ಏಡಿ ಬಲೆಗೆ ತೆರಳಿದ  ನಾಲ್ವರು ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯ ಯೋಗೇಶ್ ಅವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ಮೀನುಗಾರರನ್ನು ರಕ್ಷಿಸಲಾಗಿದೆ.

ಕಡಲು  ಪ್ರಕ್ಷುಬ್ದಗೊಂಡಿದ್ದು, ಈಜು ಬರುತ್ತದೆ ಎಂದು ಹೇಳಿ ಯಾರೂ ಸಹ ನೀರಿಗೆ ಇಳಿಯಬೇಡಿ. ಯಾವ ಕ್ಷಣದಲ್ಲಿ ಅಲೆಗಳು ಮೇಲುಕ್ಕಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಎಲ್ಲಾ ಮೀನುಗಾರರು ಲೈಫ್ ಜಾಕೇಟ್ ಹಾಕಿಯೇ ಮೀನುಗಾರಿಕೆಗೆ ಹೋಗಿ ಎಂದು ಈಶ್ವರ್ ಮಲ್ಪೆ ಸಲಹೆ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.