ಉಡುಪಿ : ಕಾರು ಹಾಗೂಬ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಸಂಭವಿಸಿದೆ.
ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಕಾಪು ಪೇಟೆಯಿಂದ ಪೊಲಿಪು ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಿಕ್ಷಾ ಚಾಲಕ ಪೂರ್ಣೇಶ್ ಮತ್ತು ಪ್ರಯಾಣಿಕ ನೂರ್ ಸಾಹೇಬ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಹೆದ್ದಾರಿ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.